ಲಾವಣ್ಯ ಕೊಲೆ ಪ್ರಕರಣದ ಹಂತಕ ಕೃಷಿಕರು ಬಳಸುವ ಕತ್ತಿ ಖರೀದಿಸಿದ್ದೆಲ್ಲಿ?

kadaba times

ಜುಲೈ 16 ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ಚೇತನ್, ಕೃತ್ಯಕ್ಕೆ ಬಳಸಿದ್ದ ಕತ್ತಿಯನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಹಿನ್ನೆಲೆಯಲ್ಲಿ ಬುಧವಾರದಂದು ಆತನನ್ನು ಸ್ಥಳಕ್ಕೆ ಕರೆತಂದು ಪೊಲೀಸರು ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

kadaba times
uniq

ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ಬಿ.ಸಿ.ರೋಡ್ ಬಸ್ ನಿಲ್ದಾಣದ ಲಾವಣ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಗೆ ಬಳಸಿದ್ದ ಮಾರಕಾಸ್ತ್ರವನ್ನು ಖರೀದಿಸಿದ್ದ ಸ್ಥಳದಲ್ಲಿ ಪೊಲೀಸರು ಆರೋಪಿ ಚೇತನ್‌ನನ್ನು ಕರೆತಂದು ಬುಧವಾರದಂದು ಸ್ಥಳ ಮಹಜರು ನಡೆಸಿದ್ದಾರೆ.

ಕಳೆದ ಜುಲೈ 16 ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಾರನ್ನು ಆರೋಪಿ ಚೇತನ್ ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ತಂಡ ಆತನನ್ನು ಉಪ್ಪಿನಂಗಡಿಗೆ ಕರೆತಂದಿತ್ತು.

ಕಪ್ಪು ಮುಸುಕು ಧರಿಸಿ ಬಿಗಿ ಭದ್ರತೆಯಲ್ಲಿ ಮಹಜರು:

ಬುಧವಾರದಂದು ತನಿಖಾಧಿಕಾರಿಗಳು ಆರೋಪಿ ಚೇತನ್‌ಗೆ ಕಪ್ಪು ಬಟ್ಟೆಯಿಂದ ಮುಖ ಮರೆಮಾಚಿ ಉಪ್ಪಿನಂಗಡಿಯ ಪ್ರಮುಖ ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಕರೆತಂದಿದ್ದರು. ಮಳಿಗೆಯಲ್ಲಿದ್ದ ಸಿಬ್ಬಂದಿಗಳು ಪೊಲೀಸರ ತನಿಖೆ ಹಾಗೂ ಮಹಜರು ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಿದರು.

ಕೊಲೆಗೆ ಪಕ್ಕಾ ಪ್ಲಾನ್: ಸಿಸಿಟಿವಿಯಲ್ಲಿ ಸೆರೆಯಾಯ್ತು ಕತ್ತಿ ಖರೀದಿಸಿದ ದೃಶ್ಯ

ಪೊಲೀಸರ ತನಿಖೆಯಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ತನ್ನ ಏಕಮುಖ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡಿದ್ದ ಆರೋಪಿ ಚೇತನ್, ಲಾವಣ್ಯಾರನ್ನು ಹತ್ಯೆ ಮಾಡಲು ಮೊದಲೇ ಪಕ್ಕಾ  ಯೋಜನೆ ರೂಪಿಸಿದ್ದ.

kadaba times
kadaba times

ಇದಕ್ಕೆ ಪೂರಕವಾಗಿ ಕೊಲೆಯ ಹಿಂದಿನ ದಿನವಾದ ಜುಲೈ 15 ರಂದೇ ಉಪ್ಪಿನಂಗಡಿಗೆ ಆಗಮಿಸಿದ್ದ ಈತ, ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ್ದ. ಕೃಷಿಕರು ಬಳಸುವ ಉದ್ದನೆಯ ಕತ್ತಿಯನ್ನು ಪರಿಶೀಲಿಸಿ ಬೆಲೆ ಕೇಳಿದ್ದ. ಬಳಿಕ ಮಳಿಗೆಯಿಂದ ಹೊರಹೋಗಿ ಬೇರೆ ಅಂಗಡಿಗಳಲ್ಲಿ ವಿಚಾರಿಸಲು ಯತ್ನಿಸಿ, ಮರಳಿ ಅದೇ ಮಳಿಗೆಗೆ ಬಂದು ಕತ್ತಿಯನ್ನು ಖರೀದಿಸಿದ್ದ.

ಕಾಗದದಿಂದ ಸುತ್ತಿ ಪ್ಯಾಕ್ ಮಾಡಲಾದ ಕತ್ತಿಯನ್ನು ಮಳಿಗೆಯಲ್ಲೇ ಸ್ವಲ್ಪ ಹೊತ್ತು ಇರಿಸಿ ಹೊರಹೋದಾತ, ಕೆಲ ಸಮಯದ ನಂತರ ಮರಳಿ ಬಂದು ಕತ್ತಿಯನ್ನು ಪಡೆದುಕೊಂಡು ಹೋಗಿದ್ದ. ಈ ಎಲ್ಲಾ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಾಕ್ಷ್ಯವಾಗಿದೆ.

ಪ್ರಕರಣದ ಕುರಿತು ಪೊಲೀಸರು ಸುದೀರ್ಘ ತನಿಖೆ ಮುಂದುವರಿಸಿದ್ದು, ಕಠಿಣ ಕಾನೂನು ಕ್ರಮ ಜರುಗಿಸಲು ಸಾಕ್ಷ್ಯಾಧಾರಗಳನ್ನು ಕ್ರೋಡೀಕರಿಸುತ್ತಿದ್ದಾರೆ.

Related Articles

Latest Articles