ಶಾಸಕ ಯಶ್‌ಪಾಲ್ ಸುವರ್ಣ ಹೇಳಿಕೆ ಖಂಡಿಸಿ ಕಡಬದಲ್ಲಿ ಕಾಂಗ್ರೆಸ್ ಪ್ರತಿಭಟನೆ

kadaba times

ಕಡಬ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಗಾಂಧಿ ಕುಟುಂಬದ ಕುರಿತು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗ್ರೆಸ್ ಹಾಗೂ ಕಡಬ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಜುಲೈ 31ರಂದು ಕಡಬದಲ್ಲಿ  ಪ್ರತಿಭಟನೆ ನಡೆಯಿತು.

kadaba times
uniq

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬಿಲಾಷ್ ಪಿ.ಕೆ. ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ: ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್, “ಜನಪ್ರತಿನಿಧಿಯಾಗಿರುವ ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಷ್ಟ್ರೀಯ ನಾಯಕರ ಕುರಿತು ಈ ರೀತಿಯ ಹಗುರ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವುದು ತೀರಾ ಖಂಡನೀಯ. ಇಂತಹ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಯುವಜನರನ್ನು ತಪ್ಪು ದಾರಿಗೆ ಎಳೆಯುವ ಹುನ್ನಾರ ನಡೆಯಬಾರದು. ಹೇಳಿಕೆ ನೀಡಿರುವ ಶಾಸಕರ ವಿರುದ್ಧ ಪೊಲೀಸರು ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ (ಗ್ರಾಮಾಂತರ) ಅಧ್ಯಕ್ಷೆ ಉಷಾ ಅಂಚನ್ ಮಾತನಾಡಿ, “ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ಶಾಸಕರೇ ಅಶಾಂತಿಗೆ ಕಾರಣವಾಗುವಂತೆ ಮಾತನಾಡುವುದು ಸರಿಯಲ್ಲ. ಪ್ರತಿಯೊಬ್ಬ ಜನಪ್ರತಿನಿಧಿಯೂ ಅತ್ಯಂತ ಜವಾಬ್ದಾರಿಯಿಂದ ವರ್ತಿಸಬೇಕು” ಎಂದು ಎಚ್ಚರಿಸಿದರು.

kadaba times
kadaba times

ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ:

ಇದೇ ವೇಳೆ ನೀಟ್ (NEET) ಪರೀಕ್ಷೆ ಅಕ್ರಮ ಸೇರಿದಂತೆ ಯುವಜನರು ಎದುರಿಸುತ್ತಿರುವ ನಾನಾ ಸಮಸ್ಯೆಗಳ ಕುರಿತು ಕಾಂಗ್ರೆಸ್ ಹಮ್ಮಿಕೊಂಡಿದ್ದ ನಿರಂತರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಶಿಕ್ಷಣ ಸಚಿವರ ರಾಜೀನಾಮೆ ಪಡೆದಿತ್ತು. ಆದರೆ ಖಾಲಿ ಇದ್ದ ಆ ಸ್ಥಾನಕ್ಕೆ ಯುವ ನಾಯಕರಿಗೆ ಅವಕಾಶ ನೀಡುವ ಬದಲು ಪ್ರಹ್ಲಾದ್ ಜೋಶಿ ಅವರನ್ನು ನೇಮಕ ಮಾಡಿರುವುದನ್ನು ಕಾಂಗ್ರೆಸ್ ನಾಯಕರು  ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಮುಖರು  ಹಾಗೂ ಮಹಿಳಾ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Latest Articles