ಕಡಬದಲ್ಲಿ ಗಾಳಿ ಮಳೆಗೆ ದುರಂತ: ಉಪ ಮುಖ್ಯಮಂತ್ರಿ ಟ್ವೀಟ್: ಸಂತಾಪ, ಪರಿಹಾರಕ್ಕೆ ಸೂಚನೆ

kadaba times

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಗಾಳಿ-ಮಳೆಗೆ ಕಡಬ ತಾಲೂಕಿನಲ್ಲಿ ಸಂಭವಿಸಿದ ದುರಂತಗಳಲ್ಲಿ ಕೃಷಿಕರೊಬ್ಬರು ಮೃತಪಟ್ಟು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆಗೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

kadaba times
uniq

ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಸಚಿವರು, ಕಡಬ ತಾಲೂಕಿನಲ್ಲಿ ನಡೆದ ಅವಘಡಗಳ ಕುರಿತು ತೀವ್ರ ಆತಂಕ ಹಾಗೂ ಸಾಂತ್ವನ ವ್ಯಕ್ತಪಡಿಸಿದ್ದಾರೆ.

kadaba times
kadaba times

ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಭಾರಿ ಗಾಳಿಗೆ ಅಡಿಕೆ ಮರ ಮುರಿದು ಬಿದ್ದು ಯಾದವ ಗೌಡ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನೊಂದೆಡೆ ಬಳ್ಪ ಗ್ರಾಮದ ನೇರ್ಪು ಎಂಬಲ್ಲಿ ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣದ ಪರಿಹಾರಕ್ಕೆ ಸೂಚನೆ:

ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಮಾತನಾಡಿರುವುದಾಗಿ ತಿಳಿಸಿರುವ ಗೃಹ ಸಚಿವರು, ದುರಂತಕ್ಕೊಳಗಾದ ನೊಂದ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸೂಕ್ತ ಪರಿಹಾರ ಧನವನ್ನು ಆದಷ್ಟು ಬೇಗನೆ ವಿತರಿಸುವಂತೆ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಲ್ಲದೆ, ಮೃತರ ಆತ್ಮಕ್ಕೆ ಶಾಂತಿ ಕೋರಿ, ಗಾಯಗೊಂಡ ಮಹಿಳೆ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.

ಮಳೆ ಹಾಗೂ ಬಿರುಗಾಳಿ ತೀವ್ರವಾಗಿರುವ ಈ ಸಂದರ್ಭದಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಸಚಿವರು ಕರೆ ನೀಡಿದ್ದಾರೆ. “ಮನೆಯ ಸುತ್ತಮುತ್ತ ಅಪಾಯಕಾರಿಯಾಗಿ ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ಅವು ಬೀಳುವವರೆಗೆ ಕಾಯದೆ ತಕ್ಷಣವೇ ತೆರವುಗೊಳಿಸಬೇಕು. ಗಾಳಿ ಜೋರಾಗಿ ಬೀಸುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮರದ ಕೆಳಗೆ ನಿಲ್ಲದೆ ಜಾಗ್ರತೆ ವಹಿಸಬೇಕು. ಸಾರ್ವಜನಿಕರು ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಹೆಚ್ಚಿನ ಅವಘಡಗಳನ್ನು ತಡೆಯಲು ಸಾಧ್ಯವಿದೆ” ಎಂದು ಸಚಿವರು ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಕಡಬ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.ಜೊತೆಗೆ ಕುಟುಂಬಕ್ಕೆ ಸ್ವಾಂತನ ನೀಡಿ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಪರಿಹಾರ ಒದಗಿಸಿ ಕೊಡುವ ಭರವಸೆ ನೀಡಿದ್ದಾರೆ.

Related Articles

Latest Articles