ಪೆರಿಯಶಾಂತಿ ಸಮೀಪದ ರೆಖ್ಯಾ ಗ್ರಾಮದಲ್ಲಿ ಕಾಡಾನೆ ಅಟ್ಟಹಾಸ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಆನೆ ದಾಳಿಗೆ ಬಲಿ ಶಂಕೆ

kadaba times

ಬೆಳ್ತಂಗಡಿ ತಾಲೂಕಿನ ರೆಕ್ಯ ಗ್ರಾಮದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಕಾಡಾನೆಯೊಂದರ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

kadaba times
uniq

​ರೆಕ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಮೃತಪಟ್ಟ ದುರ್ದೈವಿ.

​ದಾರಿಯಲ್ಲಿ ಸಿಕ್ಕ ಪ್ಲಾಸ್ಟಿಕ್; ಸ್ಥಳೀಯರ ಹುಡುಕಾಟದಲ್ಲಿ ಮೃತದೇಹ ಪತ್ತೆ

​ಲಭ್ಯವಿರುವ ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಶನಿವಾರ ಮುಚ್ಚಿರಡ್ಕ ಭಾಗದಲ್ಲಿ ಕೃಷಿ/ಕೂಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳಬೇಕಿತ್ತು. ಆದರೆ ತಡರಾತ್ರಿಯಾದರೂ ಅವರು ಮನೆಗೆ ತಲುಪದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಸಂಚರಿಸುವ ದಾರಿಯಲ್ಲಿ ಹುಡುಕಾಟ ನಡೆಸಿದ್ದಾರೆ.

​ಈ ವೇಳೆ ಅವರು ಮಳೆಯಿಂದ ರಕ್ಷಣೆಗೆ ಹೊದ್ದುಕೊಳ್ಳುತ್ತಿದ್ದ ಪ್ಲಾಸ್ಟಿಕ್ ದಾರಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದರಿಂದ ಅನುಮಾನಗೊಂಡು ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಿದಾಗ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ.

kadaba times
kadaba times

​ಘಟನಾ ಸ್ಥಳದ ತೀರಾ ಸಮೀಪದಲ್ಲಿ ಕಾಡಾನೆಯ ಬೃಹತ್ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕೆಲಸ ಮುಗಿಸಿ ಒಂಟಿಯಾಗಿ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಸಾಯಿಸಿರಬಹುದು ಎಂದು ಶಂಕಿಸಲಾಗಿದೆ.

​ ಸ್ಥಳಕ್ಕೆ ಅಧಿಕಾರಿಗಳ ಭೇಟಿ:

​ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

​ಸುಬ್ರಹ್ಮಣ್ಯ, ಕಡಬ ಹಾಗೂ ಬೆಳ್ತಂಗಡಿ ಗಡಿ ಭಾಗಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ತಕ್ಷಣವೇ ಸೂಕ್ತ ಆನೆ ತಡೆ ಗೋಡೆ ಅಥವಾ ಕಾರ್ಯಪಡೆ ರಚಿಸಿ ಗ್ರಾಮಸ್ಥರ ಜೀವ ರಕ್ಷಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related Articles

Latest Articles