ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಆಗಸ್ಟ್ 3ರಂದು ಶಾಲಾ-ಕಾಲೇಜುಗಳಿಗೆ ರಜೆ

kadaba times

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹೊರಡಿಸಿರುವ ಮಳೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೆ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 03 (03.08.2026) ರಂದು ಶಾಲಾ-ಕಾಲೇಜುಗಳಿಗೆ ತುರ್ತು ರಜೆ ಘೋಷಿಸಿದೆ.

kadaba times
uniq

​ಮಂಗಳೂರು ಉಪವಿಭಾಗ (ಮಂಗಳೂರು, ಬಂಟ್ವಾಳ, ಮೂಡಬಿದಿರೆ, ಮುಲ್ಕಿ, ಉಳ್ಳಾಲ ತಾಲೂಕುಗಳು) ​ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10 ನೇ ತರಗತಿಯವರೆಗೆ, ವಸತಿ ಶಾಲೆಗಳೂ ಸೇರಿದಂತೆ) ರಜೆ ಇರಲಿದೆ.

kadaba times
kadaba times

​ಪುತ್ತೂರು ಉಪವಿಭಾಗ (ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳು :​ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ (PU) ಕಾಲೇಜುಗಳು, ಎಲ್ಲಾ ITI ಹಾಗೂ Diploma ಕಾಲೇಜುಗಳಿಗೆ (12 ನೇ ತರಗತಿಯವರೆಗೆ, ಎಲ್ಲಾ ವಸತಿ ಶಾಲಾ-ಕಾಲೇಜುಗಳೂ ಸೇರಿದಂತೆ) ರಜೆ ಘೋಷಿಸಲಾಗಿದೆ.

Related Articles

Latest Articles