ಬಿಳಿನೆಲೆ ಗ್ರಾ.ಪಂ. ಪಿಡಿಒ ಗೆ ಎಡಮಂಗಲ ಗ್ರಾ.ಪಂ ನ ಪ್ರಭಾರ ಜವಾಬ್ದಾರಿ

kadaba times

ಕಡಬ ತಾಲೂಕಿನ ಎಡಮಂಗಲ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ (PDO) ಭವ್ಯ ಎಂ.ಬಿ. ಅವರು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಬಿಳಿನೆಲೆ ಗ್ರಾ.ಪಂ. PDO ಆಗಿರುವ ಶ್ರೀಮತಿ ಚಂದ್ರಾವತಿ ರೈ ಅವರಿಗೆ ಹೆಚ್ಚುವರಿ ಪ್ರಭಾರ ಜವಾಬ್ದಾರಿ ನೀಡಲಾಗಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

kadaba times
uniq

ಕಡಬ /ಎಡಮಂಗಲ: ಕಡಬ ತಾಲೂಕಿನ ಎಡಮಂಗಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವರ್ಗಾವಣೆ ಹಾಗೂ ನೂತನ ಪ್ರಭಾರ ಅಧಿಕಾರಿಯ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.

ಕಳೆದ ಮೂರು ವರ್ಷಗಳಿಂದ ಬಿಳಿನೆಲೆ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ (PDO) ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಚಂದ್ರಾವತಿ ರೈ ಅವರಿಗೆ ಎಡಮಂಗಲ ಗ್ರಾಮ ಪಂಚಾಯತ್‌ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದ್ದು, ಅವರು ಜುಲೈ 3ರಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

kadaba times
kadaba times

ಶ್ರೀಮತಿ ಚಂದ್ರಾವತಿ ರೈ ಅವರು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ದಕ್ಷ ಹಾಗೂ ಸಾರ್ವಜನಿಕ ಸ್ನೇಹಿ ಅಧಿಕಾರಿ ಎಂದು ಗುರುತಿಸಿಕೊಂಡಿದ್ದಾರೆ. ಇವರು ಈ ಹಿಂದೆ ಬಾಳಿಲ ಹಾಗೂ ಕೊಡಿಯಾಲ ಗ್ರಾಮ ಪಂಚಾಯತ್‌ಗಳಲ್ಲಿ ಖಾಯಂ PDO ಆಗಿ ಕರ್ತವ್ಯ ನಿರ್ವಹಿಸಿದ್ದರೆ, ಮುರುಳ್ಯ ಹಾಗೂ ಪಂಜ ಗ್ರಾಮ ಪಂಚಾಯತ್‌ಗಳಲ್ಲಿಯೂ ನಿಯೋಜನೆಯ ಮೇಲೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಎಡಮಂಗಲ ಗ್ರಾಮ ಪಂಚಾಯತ್‌ನಲ್ಲಿ PDO ಆಗಿ ಸೇವೆ ಸಲ್ಲಿಸುತ್ತಿದ್ದ ಭವ್ಯ ಎಂ.ಬಿ. ಅವರನ್ನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಪಂಚಾಯತಿಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿ  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ವಿನಾಯಕ್ ಕರ್ಭಾರಿ ನರ್ವಾಡೆ ಅವರು ಆದೇಶ ಹೊರಡಿಸಿದ್ದರು.

Related Articles

Latest Articles