ಕಡಬ: ಹೊಸಮಠ ಸೇತುವೆ ಬಳಿ ‘ಮೃತ್ಯುಕೂಪ’: ರಸ್ತೆ ಗುಂಡಿ ಮುಚ್ಚಿದ PWD

kadaba times

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸಮಠ ಸೇತುವೆ ಪಕ್ಕದಲ್ಲಿ ಅಪಾಯಕಾರಿ ರಸ್ತೆ ಗುಂಡಿಗಳು ನಿರ್ಮಾಣವಾಗಿದ್ದು, ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ.  ಪ್ರಾಣಾಪಾಯ ಸಂಭವಿಸುವ ಮುನ್ನ ಲೋಕೋಪಯೋಗಿ ಇಲಾಖೆ (PWD) ತಕ್ಷಣವೇ ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಬೇಕೆಂದು ಸ್ಥಳೀಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದರು

kadaba times
uniq

ಕಡಬ / ಹೊಸಮಠ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹಲವೆಡೆ ಭಾರಿ ಪ್ರಮಾಣದಲ್ಲಿ ರಸ್ತೆ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಪ್ರಯಾಣಿಕರು ನಿತ್ಯ ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ.

 ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಠ ಸೇತುವೆ ಪಕ್ಕದಲ್ಲೇ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಗಳು ಬಾಯಿ ತೆರೆದು ನಿಂತಿದ್ದು, ವಾಹನ ಸವಾರರಿಗೆ ‘ಮೃತ್ಯುಕೂಪ’ವಾಗಿ ಪರಿಣಮಿಸಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೊಸಮಠ ಸೇತುವೆಯ ಬಳಿ  ದೊಡ್ಡ ಗುಂಡಿಗಳು ಸೃಷ್ಟಿಯಾಗಿವೆ. ರಸ್ತೆಯಲ್ಲಿ ಸಂಚರಿಸುವಾಗ ನೀರಿನಿಂದ ಆವೃತವಾಗಿರುವ ಈ ಗುಂಡಿಗಳು ಚಾಲಕರಿಗೆ ಸ್ಪಷ್ಟವಾಗಿ ಕಾಣಿಸುತ್ತಿಲ್ಲ.

kadaba times
kadaba times

ಈಗಾಗಲೇ ಹಲವು ದ್ವಿಚಕ್ರ ವಾಹನ ಸವಾರರು ಈ ಗುಂಡಿಗಳಿಗೆ ಬಿದ್ದು ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ವೇಳೆಯಂತೂ ಇಲ್ಲಿ ಅಪಾಯದ ತೀವ್ರತೆ ಮತ್ತಷ್ಟು ಹೆಚ್ಚುತ್ತಿದೆ.

 ಸರಿಪಡಿಸಿದ  ಲೋಕೋಪಯೋಗಿ ಇಲಾಖೆ (PWD) 

ಈ ರಾಜ್ಯ ಹೆದ್ದಾರಿಯಲ್ಲಿ ದಿನಂಪ್ರತಿ ಸಾವಿರಾರು ಖಾಸಗಿ ವಾಹನಗಳು, ಕೆಎಸ್‌ಆರ್‌ಟಿಸಿ ಬಸ್ಸುಗಳು ಹಾಗೂ ಭಕ್ತಾದಿಗಳ ವಾಹನಗಳು ಸಂಚರಿಸುತ್ತವೆ. ರಸ್ತೆ ಸಂಪೂರ್ಣ ಹಾಳಾಗಿದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಲೋಕಪಯೋಗಿ ಇಲಾಖೆಯ ಅಧಿಕಾರಿಗಳು ಸರಿಪಡಿಸಿದ್ದಾರೆ.

Related Articles

Latest Articles