ಮರ್ದಾಳ ಬಳಿ ಚರಂಡಿಗೆ ಬಿದ್ದ ಲಾರಿ: ಪ್ರಾಣಾಪಾಯದಿಂದ ಪಾರಾದ ಚಾಲಕ

kadaba times

ಮೆಲ್ಕಾರ್‌ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರ್ಧಾಳದಲ್ಲಿ ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಲಾರಿಯಲ್ಲಿದ್ದ ಇಟ್ಟಿಗೆಗಳನ್ನು ಮತ್ತೊಂದು ವಾಹನಕ್ಕೆ ಲೋಡ್ ಮಾಡಿ, ಕ್ರೇನ್ ಸಹಾಯದಿಂದ ಲಾರಿಯನ್ನು ಮೇಲಕ್ಕೆತ್ತಲಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

kadaba times
uniq

ಕಡಬ / ಮರ್ಧಾಳ: ಮೆಲ್ಕಾರ್‌ನಿಂದ ಪ್ರಸಿದ್ಧ  ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಹೊರೆತುಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ಮರ್ಧಾಳದಲ್ಲಿ ಸಂಭವಿಸಿದೆ.

​ಅದೃಷ್ಟವಶಾತ್ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
​
​ಮೆಲ್ಕಾರ್ ಕಡೆಯಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಚಲಿಸುತ್ತಿದ್ದ ಈ ಸಿಮೆಂಟ್ ಇಟ್ಟಿಗೆ ಲಾರಿಯು ಮರ್ಧಾಳ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಯತ್ತ ವಾಲಿಬಿದ್ದಿದೆ.

kadaba times
kadaba times

ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಸಿಮೆಂಟ್ ಇಟ್ಟಿಗೆಗಳನ್ನು  ಮತ್ತೊಂದು ಲಾರಿಗೆ ಭರ್ತಿ ಮಾಡಲಾಯಿತು.ತದನಂತರ, ಘಟನಾ ಸ್ಥಳಕ್ಕೆ ಕ್ರೇನ್ ತರಿಸಿ, ಚರಂಡಿಯಲ್ಲಿ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತಿ ರಸ್ತೆ ಸಂಚಾರವನ್ನು ಸುಗಮಗೊಳಿಸಲಾಯಿತು.

KADABA TIMES NEWS
KADABA TIMES NEWShttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಮಾಧ್ಯಮವಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ. ಇದರ ಜೊತೆಗೆ ದ.ಕ ಜಿಲ್ಲೆಯ ಪ್ರಮುಖ ಸುದ್ದಿಗಳು, ರಾಜ್ಯ,ದೇಶದ ಮಹತ್ವದ ಘಟನಾವಳಿಗಳನ್ನು ಸ್ಥಳೀಯರಿಗೆ ತಲುಪಿಸುತ್ತದೆ. ನಮ್ಮನ್ನು ಬೆಂಬಲಿಸಿ ಮತ್ತು ಪ್ರೋತ್ಸಾಹಿಸಿ. ನಿಮ್ಮೂರಿನ ಸುದ್ದಿ ಮಾಹಿತಿಗಳನ್ನು +91 93804 74819 ಗೆ ವಾಟ್ಸಪ್ ಮಾಡಿ.

Related Articles

Latest Articles