ಮರ್ದಾಳ: ಪಾಲ್ಸ್ ಗೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ತಡೆದು ನೈತಿಕ ಪೊಲೀಸ್ ಗಿರಿ

kadaba times

ಕಡಬ ತಾಲೂಕಿನ ಮರ್ಧಾಳ ಸಮೀಪದ ಕುಂಡಡ್ಕ ಪಾಲ್ಸ್ ಕಡೆಗೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಸ್ಥಳೀಯ ಐವರ ತಂಡವೊಂದು ತಡೆದು, ಅನುಚಿತವಾಗಿ ವರ್ತಿಸಿ ಬೆದರಿಕೆಯೊಡ್ಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 3ರಂದು ನಡೆದ ಈ ಘಟನೆ ಕುರಿತು ಮಾಹಿತಿ ತಿಳಿದ ಬಳಿಕ  ಕಡಬ ಪೊಲೀಸರು ಸಂಬಂಧಪಟ್ಟ ಶಾಲೆಗೆ ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

kadaba times
uniq

ಕಡಬ / ಮರ್ಧಾಳ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಧಾಳ ಸಮೀಪವಿರುವ ಕುಂಡಡ್ಕ ಪಾಲ್ಸ್ ಕಡೆಗೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳನ್ನು ಸ್ಥಳೀಯ ಕೆಲ ವ್ಯಕ್ತಿಗಳ ತಂಡವೊಂದು ತಡೆದು, ಅನುಚಿತವಾಗಿ ವರ್ತಿಸಿ ಬೆದರಿಕೆಯೊಡ್ಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜುಲೈ 3ರಂದು ಈ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ಆತಂಕಗೊಂಡ ಹಿನ್ನೆಲೆಯಲ್ಲಿ ವಿಷಯವನ್ನು ತಕ್ಷಣವೇ ಯಾರ ಬಳಿಯೂ ಹಂಚಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ. ಮರ್ಧಾಳದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಹಾಗೂ 10ನೇ ತರಗತಿಯ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಹಪಾಠಿಗಳು ಕುಂಡಡ್ಕ ಪಾಲ್ಸ್ ಪರಿಸರದತ್ತ ತೆರಳುತ್ತಿದ್ದರು.

ಈ ವೇಳೆ ಮರ್ಧಾಳ ಪರಿಸರದವರೆನ್ನಲಾದ ಐವರ ತಂಡವೊಂದು ವಿದ್ಯಾರ್ಥಿಗಳನ್ನು ಮಾರ್ಗಮಧ್ಯೆ ತಡೆದು, ಅವರೊಂದಿಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದೆ ಎನ್ನಲಾಗಿದೆ. ಅಪ್ರಾಪ್ತ ವಿದ್ಯಾರ್ಥಿಗಳು ಘಟನೆಯಿಂದ ತೀವ್ರ ಭಯಭೀತರಾಗಿದ್ದರಿಂದ ಪ್ರಾರಂಭದಲ್ಲಿ ಈ ವಿಷಯವನ್ನು ಹೆತ್ತವರಾಗಲಿ ಅಥವಾ ಶಾಲಾ ಶಿಕ್ಷಕರ ಗಮನಕ್ಕಾಗಲಿ ತಂದಿರಲಿಲ್ಲ.

kadaba times
kadaba times

ವಿಷಯ ಸಾಮಾಜಿಕ ವಲಯ ಹಾಗೂ ಸ್ಥಳೀಯವಾಗಿ ಸದ್ದು ಮಾಡುತ್ತಿದ್ದಂತೆಯೇ ತಕ್ಷಣವೇ ಜಾಗೃತರಾದ ಕಡಬ ಪೊಲೀಸ್ ಠಾಣೆಯ ಅಧಿಕಾರಿಗಳು ಸಂಬಂಧಪಟ್ಟ ಶಾಲೆಗೆ ಭೇಟಿ ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳಿಂದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.

ಕಾನೂನನ್ನು ಕೈಗೆತ್ತಿಕೊಂಡು ಅಪ್ರಾಪ್ತ ವಿದ್ಯಾರ್ಥಿಗಳಿಗೆ ತೊಂದರೆ ನೀಡಿದವರ ವಿರುದ್ಧ ಸೂಕ್ತ ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Latest Articles