
ಬೆಂಗಳೂರಿನಲ್ಲಿ ಆಗಸ್ಟ್ 13 ರಿಂದ ಆಗಸ್ಟ್ 27 ರವರೆಗೆ ರಾಜ್ಯ ವಿಧಾನಸಭೆಯ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ ಹಾಗೂ ಕಡಬದ ತಾಲೂಕು ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಪ್ರಸಾದ್ ಕಾಟೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸುಳ್ಯ / ಕಡಬ:ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 13 ರಿಂದ ಆಗಸ್ಟ್ 27 ರವರೆಗೆ ಕರ್ನಾಟಕ ರಾಜ್ಯ ವಿಧಾನಸಭೆಯ ಸಾಲು ಸಾಲು ಅಧಿವೇಶನಗಳು ಜರುಗಲಿರುವ ಹಿನ್ನೆಲೆಯಲ್ಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ತಮ್ಮ ಕ್ಷೇತ್ರದ ಸುಳ್ಯ ಹಾಗೂ ಕಡಬ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ.
ಈ ಕುರಿತು ಶಾಸಕರ ಆಪ್ತ ಕಾರ್ಯದರ್ಶಿ ಪ್ರಸಾದ್ ಕಾಟೂರು ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದ್ದಾರೆ.


ಅಧಿವೇಶನ ಮುಕ್ತಾಯಗೊಂಡ ನಂತರ ಎಂದಿನಂತೆ ಶಾಸಕಿಯವರು ಸುಳ್ಯ ಹಾಗೂ ಕಡಬ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಸಿಗಲಿದ್ದು, ಕುಂದುಕೊರತೆಗಳನ್ನು ಸ್ವೀಕರಿಸಲಿದ್ದಾರೆ.
