ನೆಲ್ಯಾಡಿ: ಮಾಜಿ ಗ್ರಾ.ಪಂ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಇನ್ನು ನೆನಪು ಮಾತ್ರ

kadaba times

ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಹಿರಿಯ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಸಾರ್ವಜನಿಕರು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

kadaba times
uniq

ನೆಲ್ಯಾಡಿ / ಕಡಬ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶನಿವಾರ ನಿಧನರಾಗಿದ್ದಾರೆ.

ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜಯಾನಂದ ಬಂಟ್ರಿಯಾಲ್ ಅವರು ಹಲವು ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೆಲ್ಯಾಡಿ ವಲಯ ಅಧ್ಯಕ್ಷರಾಗಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

kadaba times
kadaba times

ನೆಲ್ಯಾಡಿ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ನೆಲ್ಯಾಡಿ ಗೆಳೆಯರ ಬಳಗದ ಅಧ್ಯಕ್ಷರಾಗಿಯೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ಶಿಕ್ಷಕರ ಹಾಗೂ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರದಲ್ಲಿಯೂ ತಮ್ಮದೇ ಆದ ಕೊಡುಗೆ ನೀಡಿದ್ದರು.

ಸರಳ ಸ್ವಭಾವ, ಸಮಾಜಮುಖಿ ಚಿಂತನೆ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸ್ಥಳೀಯವಾಗಿ ಗುರುತಿಸಿಕೊಂಡಿದ್ದ ಜಯಾನಂದ ಬಂಟ್ರಿಯಾಲ್ ಅವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

Related Articles

Latest Articles