24.3 C
Kadaba
Sunday, March 23, 2025

ಹೊಸ ಸುದ್ದಿಗಳು

ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ|ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು

Must read

 

kadabatimes.in
ಅಪಘಾತವಾದ ಸ್ಥಳ 

kadabatimes.in

ಕಡಬ ಟೈಮ್:   ಧರ್ಮಸ್ಥಳ
ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಲಾರಿಯೊಂದು ಒಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಧರ್ಮಸ್ಥಳ
ಕಡೆಯಿಂದ ಬರುತ್ತಿದ್ದ ಓಮಿನಿ ಮತ್ತು ಆಲ್ಟೋ ಕಾರುಗಳು, ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಮೆಸ್ಕಾಂ ಇಲಾಖೆಯ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


kadabatimes.in

ಪ್ರೇಮಾ(58),
ಹಂಪಯ್ಯ(65), ಮಂಜಯ್ಯ(60) ಪ್ರಭಾಕರ್(45) ಮೃತಪಟ್ಟವರು. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.


ಅಪಘಾತದಲ್ಲಿ
12 ಮಂದಿಗೆ ಗಾಯಗಳಾಗಿವೆ. ಮೃತರೆಲ್ಲರೂ ಚಿತ್ರದುರ್ಗ ಮತ್ತು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದ್ದು, ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ ನಡೆದಿದೆ.
ಕೊಟ್ಟಿಗೆಹಾರ ದಾಟಿ ಸ್ವಲ್ಪ ದೂರ ಬಂದಾಗ ವಾಹನವೊಂದನ್ನು ಓವರ್ ಟೇಕ್ ಮಾಡಿ ಸಾಗುವಾಗ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಓಮಿನಿ ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬರುತ್ತಿದ್ದ ಅದೇ ಕುಟುಂಬದ ಆಲ್ಟೋ ಕಾರು ಓಮಿನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.


kadabatimes.in

ಡಿಕ್ಕಿಯ
ರಭಸಕ್ಕೆ ಓಮಿನಿ ಕಾರು ನಜ್ಜು ಗುಜ್ಜಾಗಿದ್ದು ಓಮಿನಿಯಲ್ಲಿದ್ದ ಮೂವರು ಪುರುಷರು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ 
ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.