ದಕ್ಷಿಣ ಕನ್ನಡ: ಶಾಲಾ ಬಾಲಕಿ ಮೇಲೆ ಅತ್ಯಾಚಾರ; ರಿಕ್ಷಾ ಚಾಲಕ ಅರೆಸ್ಟ್

kadaba times

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಶಾಲಾ ಬಾಲಕಿಯ ಮೇಲೆ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತ ನಿರಂತರ ಕಿರುಕುಳ ನೀಡಿ, ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸರು ಆರೋಪಿಯನ್ನು ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

kadaba times
uniq

ಶಾಲೆಗೆ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಜೀವ ಬೆದರಿಕೆಯೊಡ್ಡಿ, ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ರಿಕ್ಷಾ ಚಾಲಕನನ್ನು ವೇಣೂರು ಠಾಣಾ ಪೊಲೀಸರು ತ್ವರಿತವಾಗಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಬಂಧಿತ ಆರೋಪಿ.

ಘಟನೆಯ ವಿವರ: 14 ವರ್ಷದ ಅಪ್ರಾಪ್ತ ಬಾಲಕಿಯು ಕಳೆದ ಕೆಲವು ತಿಂಗಳುಗಳಿಂದ ಆರೋಪಿ ಜಮಾಲುದ್ದೀನ್‌ನ ರಿಕ್ಷಾದಲ್ಲೇ ಶಾಲೆಗೆ ಹೋಗಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿಯು ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಇದಕ್ಕೆ ಬಾಲಕಿ ತೀವ್ರ ಪ್ರತಿರೋಧ ವ್ಯಕ್ತಪಡಿಸಿದಾಗ, ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದನು. ಇದರಿಂದ ತೀವ್ರ ಭಯಭೀತಳಾಗಿದ್ದ ಬಾಲಕಿ ಮನೆಯವರ ಬಳಿ ವಿಷಯ ಹೇಳಿಕೊಳ್ಳದೆ ಮೌನವಾಗಿದ್ದಳು.

kadaba times
kadaba times

ಆಗಸ್ಟ್ 13ರಂದು ಸಂಜೆ ವೇಳೆಗೆ ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆರೋಪಿ ಜಮಾಲುದ್ದೀನ್, ಮನೆಗೆ ನುಗ್ಗಿ ಬಾಲಕಿಗೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ & ಬಂಧನ: ಈ ಘೋರ ಕೃತ್ಯದ ಕುರಿತು ಸಂತ್ರಸ್ತ ಬಾಲಕಿ ಆಗಸ್ಟ್ 15 ರಂದು ನೀಡಿದ ದೂರಿನನ್ವಯ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 56/2026, ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ: 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ: 4(2), 8, 12 ರ ಅಡಿಯಲ್ಲಿ  ಪ್ರಕರಣ ದಾಖಲಾಗಿದೆ.

ದೂರು ದಾಖಲಾದ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ವೇಣೂರು ಪೊಲೀಸರು ಆರೋಪಿ ಜಮಾಲುದ್ದೀನ್‌ನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Related Articles

Latest Articles