ಪೆರಿಯಶಾಂತಿಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ

kadaba times

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ಹೆದ್ದಾರಿಗೆ ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಾರಿನಲ್ಲಿದ್ದ ಓರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ

kadaba times
uniq

ನೆಲ್ಯಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಆಗಸ್ಟ್ 23ರಂದು ಮುಂಜಾನೆ ಸಂಭವಿಸಿದೆ.

ವಿದ್ಯುತ್ ಕಂಬಗಳು ಹೆದ್ದಾರಿಗೆ ಉರುಳಿ ಸಂಚಾರ ಅಸ್ತವ್ಯಸ್ತ:ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಪೆರಿಯಶಾಂತಿ ತಲುಪುತ್ತಿದ್ದಂತೆ, ಹೆದ್ದಾರಿಯ ಮಧ್ಯಭಾಗದಲ್ಲಿ (ಡಿವೈಡರ್) ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಎರಡು ವಿದ್ಯುತ್ ಕಂಬಗಳು ಮುರಿದು ಹೆದ್ದಾರಿಗೆ ಉರುಳಿ ಬಿದ್ದಿದ್ದು, ಇನ್ನೂ ಎರಡು ಕಂಬಗಳು ವಾಲಿದ ಸ್ಥಿತಿಯಲ್ಲಿ ಅಪಾಯಕಾರಿಯಾಗಿ ನಿಂತಿವೆ. ವಿದ್ಯುತ್ ತಂತಿಗಳು ಹಾಗೂ ಕಂಬಗಳು ಹೆದ್ದಾರಿಯಲ್ಲೇ ಬಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

kadaba times
kadaba times

ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯ:ಅಪಘಾತದ ವೇಳೆ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪೈಕಿ ಓರ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿಗೆ ಬಿದ್ದಿದ್ದ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Related Articles

Latest Articles