ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ ಪಡೆದಿದ್ದಾರಾ?

kadaba times

ಪುತ್ತೂರು:ದಿನಾಂಕ 31.08.2026 ರಂದು ಪುತ್ತೂರು ನಗರದಲ್ಲಿ ಪ್ರತಿಭಟನಾ ಸಭೆ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸ್ಪಷ್ಟಪಡಿಸಿದೆ.

kadaba times
uniq

ಸ್ಥಳ ಬದಲಿಸಿ ಮರು ಅರ್ಜಿ ಸಲ್ಲಿಸಲು ಸೂಚನೆ: ಆಗಸ್ಟ್ 31ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ ಕೋರಿ ಸಂಘಟನೆಯೊಂದು ದಿನಾಂಕ 27.08.2026ರಂದು ಬೆಳಿಗ್ಗೆ ಅರ್ಜಿ ಸಲ್ಲಿಸಿದೆ. ಆದರೆ, ಅರ್ಜಿಯಲ್ಲಿ ಉಲ್ಲೇಖಿಸಲಾಗಿರುವ ಪ್ರತಿಭಟನಾ ಸ್ಥಳವು ಸರ್ಕಾರದ ನಿಯಮ ಹಾಗೂ ಮಾರ್ಗಸೂಚಿಗಳ (Guidelines) ಅನುಸಾರವಾಗಿ ಇಲ್ಲದಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸಂಚಾರ ಸುಸ್ಥಿತಿಯ ದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸೂಕ್ತ ಸ್ಥಳವನ್ನು ಗುರುತಿಸಿ ಮರು ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ತಿಳಿಸಲಾಗಿದ್ದು, ಸಂಬಂಧಿಸಿದ ಮಾರ್ಗಸೂಚಿಯ ಪ್ರತಿಯನ್ನೂ ಹಸ್ತಾಂತರಿಸಲಾಗಿದೆ.

kadaba times
kadaba times

ಅನುಮತಿ ರಹಿತ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ: ಇದೇ ದಿನಾಂಕ 31.08.2026 ರಂದು ಮತ್ತೊಂದು ಸಂಘಟನೆಯು ಪುತ್ತೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಸದರಿ ಸಂಘಟನೆಯು ಈವರೆಗೆ ಯಾವುದೇ ಅಧಿಕೃತ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದಿಲ್ಲ. ಒಂದು ವೇಳೆ ಆ ಸಂಘಟನೆಯು ಅನುಮತಿಗಾಗಿ ಅರ್ಜಿ ಸಲ್ಲಿಸಿದರೂ, ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಬೇರೊಂದು ದಿನಾಂಕವನ್ನು ನಿಗದಿಪಡಿಸಿ ಅನುಮತಿ ಪಡೆಯಲು ಸೂಚಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಪೊಲೀಸರ ಪ್ರಮುಖ ಮನವಿ: ಸಾರ್ವಜನಿಕರು ಪ್ರತಿಭಟನೆ ಅಥವಾ ಯಾವುದೇ ಸಾರ್ವಜನಿಕ ಸಮಾವೇಶಗಳಲ್ಲಿ ಪಾಲ್ಗೊಳ್ಳುವ ಮುನ್ನ, ಆಯೋಜಕರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯಿಂದ ಅಧಿಕೃತ ಅನುಮತಿ ಪಡೆದುಕೊಂಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅನುಮತಿ ರಹಿತ ಕಾನೂನುಬಾಹಿರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತೊಂದರೆಗೆ ಒಳಗಾಗಬಾರದು ಎಂದು ವಿನಂತಿಸಲಾಗಿದೆ.

Related Articles

Latest Articles