ಕಡಬ ಪ.ಪಂ: ಸ್ವಚ್ಛತಾ ರಾಯಭಾರಿಗಳಾದ ಪೌರ ಕಾರ್ಮಿಕರಿಗೆ ಸ್ವಚ್ಛತಾ ಕಿಟ್‌ ವಿತರಣೆ

kadaba times

ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕಡಬ ಲಯನ್ಸ್ ಕ್ಲಬ್ ವತಿಯಿಂದ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಗೌರವಾರ್ಥವಾಗಿ ಸ್ವಚ್ಛತಾ ಕಿಟ್‌ಗಳನ್ನು ವಿತರಿಸಲಾಯಿತು

kadaba times
uniq

ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕಡಬ ಲಯನ್ಸ್ ಕ್ಲಬ್ ವತಿಯಿಂದ ಸಮಾಜದ ಸ್ವಚ್ಛತಾ ರಾಯಭಾರಿಗಳಾದ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಸ್ವಚ್ಛತಾ ಕಿಟ್‌ಗಳನ್ನು ವಿತರಿಸಿ ಗೌರವಿಸಲಾಯಿತು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಹಾಗೂ ಕಡಬ ಲಯನ್ಸ್ ಅಧ್ಯಕ್ಷೆಯಾದ ನೀಲಾವತಿ ಶಿವರಾಮ್ ಅವರು ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಿದರು.

kadaba times
kadaba times

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ. ವರ್ಗೀಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಂ. ಹನೀಫ್, ಮುಖ್ಯಾಧಿಕಾರಿ ಲೀಲಾವತಿ ಇ., ಸದಸ್ಯರಾದ ಸೈಮನ್ ಸಿ.ಜೆ., ದಯಾನಂದ ಗೌಡ ಪಿಜಕ್ಕಳ, ಅಕ್ಷತಾ ಬಾಲಕೃಷ್ಣ, ಕುಸುಮ ಅಂಗಡಿಮನೆ, ರೋಹಿತ್ ಪಣೆಮಜಲು, ಕೆ.ಡಿ.ಪಿ. ಸದಸ್ಯ ಅಶ್ರಫ್ ಶೇಡಿಗುಂಡಿ ಹಾಗೂ ಕಾಂಗ್ರೆಸ್ ಮುಖಂಡ ಶರೀಫ್ ಎ.ಎಸ್. ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಪ್ರಮುಖರಾದ ಡಾ. ಸಿದ್ದಲಿಂಗ, ಜಗದೀಶ್ ನೆಟ್ಟಾರು, ಅಭಿಷೇಕ್ ಜಿ.ಎಂ., ನಾರಾಯಣ ಶೆಟ್ಟಿ, ಜೋಸ್ ಕೆ.ಜೆ., ಥಾಮಸ್ ಕೆ.ಎಸ್., ಥೆರೆಸಾ ಮ್ಯಾಥ್ಯೂ ಹಾಗೂ ಪಟ್ಟಣ ಪಂಚಾಯಿತಿ ಎಂಜಿನಿಯರ್ ಶಿವಕುಮಾರ್, ಸಿಬ್ಬಂದಿಗಳಾದ ಬಾಲಕೃಷ್ಣ ಕತ್ತಲ್‌ಸಾರ್, ಶಶಿಕಲಾ, ಕೀರ್ತನ್, ಫಯಾಝ್, ಚೈತ್ರಾ, ಆ್ಯನ್ಸಿ ,ಪಟ್ಟಣ ಪಂಚಾಯಿತಿ ಸಿಬ್ಬಂದಿ ಹರೀಶ್ ಬೆದ್ರಾಜೆ, ಸಿಬ್ಬಂದಿ ವಾರಿಜಾ ಹಾಜರಿದ್ದರು.

Related Articles

Latest Articles