28.4 C
Kadaba
Wednesday, March 19, 2025

ಹೊಸ ಸುದ್ದಿಗಳು

ಹಿಂದೂ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ಅರಣ್ಯಾಧಿಕಾರಿಯ ಬಂಧನ

Must read

 

kadabatimes.in
ಅರಣ್ಯಾಧಿಕಾರಿ ಸಂಜೀವ ಪೂಜಾರಿ(ಚಿತ್ರ ಕೃಪೆ:FACEBOOK)

kadabatimes.in

ಬೆಳ್ಳಾರೆ: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.


ವಿಚಾರಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯಾಧಿಕಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಭಜನೆ ಮಾಡುವ ಮೂಲಕ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. .

kadabatimes.in


ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಇದೀಗ ಬೆಳ್ಳಾರೆ ಪೊಲೀಸರು ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸಿದ್ದಾರೆ.


kadabatimes.in