
ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕದ 25ನೇ ವರ್ಷದ ಬೆಳ್ಳಿಹಬ್ಬದ ಅಂಗವಾಗಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ದಿನಾಂಕ 10-10-2026ರ ಶನಿವಾರ ಪೂರ್ವಾಹ್ನ 9:30 ರಿಂದ ಕಾಲೇಜು ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಪೂರ್ವ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಉಂಡಿಲ ಮನವಿ ಮಾಡಿದ್ದಾರೆ.


ಕಡಬ:ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕದ 25ನೇ ವರ್ಷದ ಬೆಳ್ಳಿಹಬ್ಬದ (2001–2026) ಐತಿಹಾಸಿಕ ಸಂಭ್ರಮದ ವಾರ್ಷಿಕ ವಿಶೇಷ ಶಿಬಿರವು ಪ್ರಸ್ತುತ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದು, ಈ ಸಂಭ್ರಮವನ್ನು ಸಾರ್ಥಕ ಹಾಗೂ ಸ್ಮರಣೀಯವಾಗಿಸುವ ಉದ್ದೇಶದಿಂದ ಅಮೂಲ್ಯ ಜೀವಗಳನ್ನು ಉಳಿಸುವ ಸಲುವಾಗಿ ನಾಳೆ( ದಿನಾಂಕ 10-10-2026ರ ಶನಿವಾರ )ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಘಟಕದ ವತಿಯಿಂದ ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಸಕ್ರಿಯ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 9:30 ರಿಂದ ಶಿಬಿರ ಜರುಗಲಿದೆ.


‘ರಕ್ತ ಕೊಡಿ… ಜೀವ ಉಳಿಸಿ’: “ಒಂದು ರಕ್ತದಾನದಿಂದ ಮತ್ತೊಬ್ಬರ ಅಮೂಲ್ಯ ಜೀವವನ್ನು ಉಳಿಸಲು ಸಾಧ್ಯವಿದೆ. ನಮ್ಮ ಕಾಲೇಜಿನ ಎನ್ಎಸ್ಎಸ್ ಘಟಕವು 25 ವರ್ಷಗಳನ್ನು ಪೂರೈಸಿ ಬೆಳ್ಳಿಹಬ್ಬ ಆಚರಿಸುತ್ತಿರುವ ಈ ಐತಿಹಾಸಿಕ ಘಟ್ಟದಲ್ಲಿ ಸಮಾಜಮುಖಿ ಸೇವೆಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕಾಲೇಜಿನ ಎಲ್ಲಾ ಎನ್ಎಸ್ಎಸ್ ಸ್ವಯಂಸೇವಕರು, ಪ್ರಸ್ತುತ ವಿದ್ಯಾರ್ಥಿಗಳು ಹಾಗೂ ಮುಖ್ಯವಾಗಿ ಸಂಸ್ಥೆಯ ಎಲ್ಲಾ ಹಳೆಯ ವಿದ್ಯಾರ್ಥಿಗಳು (ಅಲುಮ್ನಿ) ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕು” ಎಂದು ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಉಂಡಿಲ ವಿನಂತಿಸಿದ್ದಾರೆ.
ಹೆಸರು ನೋಂದಣಿಗೆ ಮಾಹಿತಿ: ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಹಿರಿಯ-ಕಿರಿಯ ವಿದ್ಯಾರ್ಥಿಗಳು, ಎನ್ಎಸ್ಎಸ್ ಸ್ವಯಂಸೇವಕರು ಹಾಗೂ ಸಾರ್ವಜನಿಕರು ತಮ್ಮ ಹೆಸರುಗಳನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಸಂಪರ್ಕ ಸಂಖ್ಯೆ: 9448952331 (ದಯಾನಂದ ಉಂಡಿಲ, ಅಧ್ಯಕ್ಷರು, ಪೂರ್ವ ವಿದ್ಯಾರ್ಥಿ ಸಂಘ)
