ನೆಲ್ಯಾಡಿ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ

kadaba times

ಮತದಾರರ ಹಕ್ಕುಗಳ ರಕ್ಷಣೆ ಹಾಗೂ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೆಲ್ಯಾಡಿ-ಕೌಕ್ರಾಡಿ ಗ್ರಾಮ ಸಮಿತಿಯ ನೇತೃತ್ವದಲ್ಲಿ ಅಕ್ಟೋಬರ್ 12ರಂದು ರಾತ್ರಿ ನೆಲ್ಯಾಡಿ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

kadaba times

ನೆಲ್ಯಾಡಿ: ದೇಶದಲ್ಲಿ ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಹಾಗೂ ಪ್ರಸ್ತುತ ಜಾರಿಯಲ್ಲಿರುವ ವಿವಾದಾತ್ಮಕ ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೆಲ್ಯಾಡಿ-ಕೌಕ್ರಾಡಿ ಗ್ರಾಮ ಸಮಿತಿಯ ವತಿಯಿಂದ ಅಕ್ಟೋಬರ್ 12ರಂದು ರಾತ್ರಿ ನೆಲ್ಯಾಡಿ ಪೇಟೆಯಲ್ಲಿ ಪ್ರತಿಭಟನೆ  ನಡೆಯಿತು.

ಚುನಾವಣಾ ಆಯುಕ್ತರ ರಾಜೀನಾಮೆಗೆ ಅಶ್ರಫ್ ತಲಪಾಡಿ ಒತ್ತಾಯ: ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಅವರು, “ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ದೇಶದ ಅಸಂಖ್ಯಾತ ಅರ್ಹ ನಾಗರಿಕರ ಮತದಾನದ ಹಕ್ಕಿಗೆ ಗಂಭೀರ ಧಕ್ಕೆ ಉಂಟಾಗಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯುತ ಹೊಣೆಗಾರಿಕೆಯನ್ನು ಕಾಪಾಡುವಲ್ಲಿ ಆಯೋಗ ವಿಫಲವಾಗಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರುತ್ತಿರುವ ಮುಖ್ಯ ಚುನಾವಣಾ ಆಯುಕ್ತರು   ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು” ಎಂದು ಗುಡುಗಿದರು.

uniq
kadaba times

ದೆಹಲಿ ಹೋರಾಟಗಾರರ ಮೇಲಿನ ದಮನಕಾರಿ ಕ್ರಮಕ್ಕೆ ಖಂಡನೆ: ಎಸ್‌ಐಆರ್ ರದ್ದು ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿವಿಧ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ನಾಯಕರು ಮತ್ತು ಹೋರಾಟಗಾರರ ಮೇಲೆ ಪೊಲೀಸರು ದಮನಕಾರಿ ಕ್ರಮಗಳನ್ನು ಜರುಗಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನುಬಾಹಿರ ಬಂಧನಗಳ ಆರೋಪಗಳ ಕುರಿತು ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಯಬೇಕು. ದೇಶದ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮತದಾನದ ಹಕ್ಕನ್ನು ಸಂರಕ್ಷಿಸಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಒಕ್ಕೊರಲಿನಿಂದ ಒತ್ತಾಯಿಸಲಾಯಿತು. ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ನೆಲ್ಯಾಡಿ-ಕೌಕ್ರಾಡಿ ಗ್ರಾಮ ಸಮಿತಿ ಅಧ್ಯಕ್ಷ ಸಮದ್ ವಹಿಸಿದ್ದರು.

Related Articles

Latest Articles