ಆಲಂಕಾರು: ಬಾವಿಯಿಂದ ನೀರು ಸೇದುವಾಗ ದುರಂತ: ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ದುರ್ಮರಣ

kadaba times

ರಾಮಕುಂಜ / ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಆನೆಗುಂಡಿ ಎಂಬಲ್ಲಿ ಮನೆಯ ಪಕ್ಕದ ಬಾವಿಯಿಂದ ನೀರು ಸೇದುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲುಜಾರಿ ಆಳದ ಬಾವಿಗೆ ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ಅಕ್ಟೋಬರ್ 17ರಂದು ನಡೆದಿದೆ.

kadaba times
uniq

​ಕೊಯಿಲ ಗ್ರಾಮದ ಆನೆಗುಂಡಿ ನಿವಾಸಿ ಡೊಂಬಯ್ಯ ಮುಗೇರ (50) ಮೃತಪಟ್ಟ ದುರ್ದೈವಿಯಾಗಿದ್ದಾರೆ.

​ನೀರು ಸೇದುವಾಗ ಸಂಭವಿಸಿದ ಅವಘಡ: ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಡೊಂಬಯ್ಯ ಮುಗೇರ ಅವರು ಅಕ್ಟೋಬರ್ 17ರಂದು ಬೆಳಿಗ್ಗೆ ಸುಮಾರು 10:30ರ ವೇಳೆಗೆ ಮನೆಯ ಪಕ್ಕದಲ್ಲೇ ಇರುವ ಬಾವಿಯಿಂದ ನೀರು ಸೇದಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಅವರು ಬಾವಿಯೊಳಗೆ ಬಿದ್ದಿದ್ದಾರೆ.

kadaba times
kadaba times

​ಅವರು ಬಾವಿಗೆ ಬಿದ್ದ ತಕ್ಷಣ ಮನೆಯವರು ಗಾಬರಿಗೊಂಡು ಅಗ್ನಿಶಾಮಕ ದಳಕ್ಕೆ ತುರ್ತು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಊರಿನ ಸಾರ್ವಜನಿಕರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಬೆಳಿಗ್ಗೆ 11:45ರ ವೇಳೆಗೆ ಡೊಂಬಯ್ಯ ಅವರನ್ನು ಬಾವಿಯಿಂದ ಮೇಲಕ್ಕೆತ್ತಲಾಯಿತು. ಆದರೆ, ಆ ವೇಳೆಗಾಗಲೇ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

​ಕಡಬ ಠಾಣೆಯಲ್ಲಿ ಪ್ರಕರಣ ದಾಖಲು:ದುರ್ಘಟನೆಯ ಕುರಿತು ಮೃತರ ಪುತ್ರ ಸುಜಿತ್‌ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಮಹಜರು ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Latest Articles