ಮಂಗಳೂರು ವಿಶೇಷ ಪೋಕ್ಸೋ ಕೋರ್ಟ್ ಮಹತ್ವದ ತೀರ್ಪು

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದಲ್ಲಿ 2018ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯವು ಆರೋಪಿ ನೆಲ್ಯಾಡಿ ಜಾಲುಮನೆ ನಿವಾಸಿ ರವಿ ಅಲಿಯಾಸ್ ರವೀಂದ್ರ ಆಚಾರ್ಯ ತಪ್ಪಿತಸ್ಥನೆಂದು ತೀರ್ಮಾನಿಸಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ. ಜತೆಗೆ ನೊಂದ ಬಾಲಕಿಗೆ ₹9 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

kadaba times

​ಪುತ್ತೂರು / ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿಯಲ್ಲಿ 2018ರಲ್ಲಿ ಸಂಭವಿಸಿದ್ದ ಅಪ್ರಾಪ್ತ ಬಾಲಕಿ ಮೇಲಿನ ಹೇಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಕೃತ್ಯ ಎಸಗಿದ್ದ ಆರೋಪಿಯು ತಪ್ಪಿತಸ್ಥ ಎಂದು ಸಾಬೀತಾಗಿದ್ದು, ಆತನಿಗೆ ಬರೋಬ್ಬರಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

​ಶಿಕ್ಷೆಗೆ ಗುರಿಯಾದ ಅಪರಾಧಿಯನ್ನು ನೆಲ್ಯಾಡಿ ಗ್ರಾಮದ ಜಾಲುಮನೆ ನಿವಾಸಿ ರವಿ ಅಲಿಯಾಸ್ ರವೀಂದ್ರ ಆಚಾರ್ಯ ಎಂದು ಗುರುತಿಸಲಾಗಿದೆ.

​ಘಟನೆಯ ಹಿನ್ನೆಲೆ : 2018ರ ಅಕ್ಟೋಬರ್ 13ರಂದು ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಯಾರಿಗಾದರೂ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಪ್ರಾಣಬೆದರಿಕೆ ಒಡ್ಡಲಾಗಿತ್ತು. ಈ ಕುರಿತು ಸಂತ್ರಸ್ತೆಯ ಕಡೆಯವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಐಪಿಸಿ ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

uniq
kadaba times

​ಘಟನೆಗೆ ಸಂಬಂಧಿಸಿದಂತೆ ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ (ಸಿಪಿಐ) ನಾಗೇಶ್ ಕೆ. ಹಾಗೂ ಕಡಬ ಪೊಲೀಸ್ ಉಪನಿರೀಕ್ಷಕರಾದ (ಪಿಎಸ್‌ಐ) ಪ್ರಕಾಶ್ ದೇವಾಡಿಗ ಅವರು ಸಮಗ್ರ ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

​ನ್ಯಾಯಾಲಯದ ಕಠಿಣ ತೀರ್ಪು ಮತ್ತು ಶಿಕ್ಷೆಯ ವಿವರ:

ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ (POCSO) ವಿಶೇಷ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಪ್ರಕರಣದ ವಿಚಾರಣೆ ನಡೆಸಿದರು. ವಿಚಾರಣಾ ಅವಧಿಯಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಒಟ್ಟು 25 ಮಂದಿ ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಆರೋಪಿಯ ವಿರುದ್ಧದ ಎಲ್ಲಾ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ ಕೆಳಗಿನಂತೆ ಶಿಕ್ಷೆ ಪ್ರಕಟಿಸಿದೆ:

Related Articles

Latest Articles