
ಕಡಬ ಟೈಮ್, ಆಲಂಕಾರು/ ರಾಮಕುಂಜ: 2025-26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್ರವರಿಗೆ ಅಭಿನಂದನಾ ಸಮಾರಂಭ ಸೆ.27ರಂದು ಸಂಜೆ ಶ್ರೀ ರಾಮಕುಂಜೇಶ್ವರ ಕ್ರೀಡಾಂಗಣದ ಶ್ರೀ ವಿಶ್ವೇಶತೀರ್ಥ ಸಭಾಂಗಣದ ಎಸ್ಜಿಕೆಹೆಚ್ಎಸ್ ವೇದಿಕೆಯಲ್ಲಿ ನಡೆಯಿತು.


ಅತಿಥಿಯಾಗಿದ್ದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಮಾತನಾಡಿ, ಸಂಸದರ ಅನುದಾನದಲ್ಲಿ 8 ತಾಲೂಕುಗಳಿಗೆ ಕಬಡ್ಡಿ ಮ್ಯಾಟ್ ನೀಡಲಾಗಿದೆ ಎಂದರು.ವಿಧಾನಪರಿಷತ್ ಸದಸ್ಯ ಭೋಜೇಗೌಡರವರು ಅಭಿನಂದನಾ ಗ್ರಂಥ ಬಿಡುಗಡೆ ಮಾಡಿದರು.ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಪ್ರಮೋದ್ಕುಮಾರ್ ಕೆ.ಕೆ.ಅವರು ಅಭಿನಂದನಾ ಭಾಷಣ ಮಾಡಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಸತೀಶ್ ಭಟ್ ಅವರು, ಬಿಳಿನೆಲೆ ಹಾಗೂ ರಾಮಕುಂಜದಲ್ಲಿ ಶಿಕ್ಷಕನಾಗಿ ಸೇವೆ ಮಾಡಲು ಅವಕಾಶ ದೊರೆತಿದೆ. ಸಂಸ್ಥೆಯ ಆಡಳಿತ ಮಂಡಳಿ, ಸಹಶಿಕ್ಷಕರು, ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಇವೆಲ್ಲವೂ ಸಾಧ್ಯವಾಗಿದೆ. ನಾನು ನಿಮಿತ್ತ ಮಾತ್ರ ಎಂದರು.
ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ನಿರ್ಣಾಯಕ ಮಂಡಳಿ ಅಧ್ಯಕ್ಷ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಪಿ.ಏನಕೆಲ್ಲು ಮಾತನಾಡಿ, ಸತೀಶ್ ಭಟ್ರವರು ವಿಶೇಷ ಸಾಧಕ. ಅತ್ಯುತ್ತಮ ಶಿಕ್ಷಕ, ಯೋಗಪಟವೂ ಆಗಿದ್ದಾರೆ. ಅವರ ಬಹಳಷ್ಟು ಶಿಷ್ಯಂದಿರು ಉನ್ನತ ಹುದ್ದೆಯಲಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ ಎಂದರು.


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ಕುಮಾರ್ ಶೆಟ್ಟಿ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಮಂಗಳೂರು ಹೈಟೆಕ್ ಬಿಲ್ಡಿಂಗ್ ಸೊಲ್ಯೂಷನ್ ಮೇನೇಜಿಂಗ್ ಡೈರೆಕ್ಟರ್ ಸಂತೋಷ್ ಟಿ.ವಿ., ಪುಣೆ ಐಡಿಬಿ ಸಾಫ್ಟ್ವೇರ್ ಕಂಪನಿಯ ರೆವೆನ್ಯೂ ಸ್ಪೆಷಲಿಸ್ಟ್ ಮಾನಸ ಭಟ್, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಸಂದರ್ಭೋಚಿತವಾಗಿ ಮಾತನಾಡಿ ಸತೀಶ್ ಭಟ್ರವರಿಗೆ ಶುಭಹಾರೈಸಿದರು.
ಪುತ್ತೂರು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್.ಎ., ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಸೇಸಪ್ಪ ರೈ, ಸದಸ್ಯ ಲಕ್ಷ್ಮೀನಾರಾಯಣ ರಾವ್ ಆತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
