
ಮೂಡುಬಿದಿರೆಯ ಕಟ್ಟೆಯಲ್ಲಿ ಮನೆಯೊಂದರ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಮಾಂಸ ಸಹಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ದಾಳಿ ನಡೆಸಿ 50ಕೆ.ಜಿ. ಮಾಂಸ ಹಾಗೂ, ಕದ್ದು ತಂದಿದ್ದಾರೆನ್ನಲಾದ 3 ದನಗಳನ್ನು ವಶಕ್ಕೆ ಪಡೆದು ಗೋಶಾಲೆಗೆ ಒಪ್ಪಿಸಲಾಗಿದೆ.
ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಆತನ ಪುತ್ರ ಸೊಹೇಲ್, ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪೊಲೀಸ್ ದಾಳಿ ಸಂದರ್ಭ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.




